2 Kings 10:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
Kannada BSI Bible 2016
ಆದರೆ ಬೇತೇಲ್, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.
Kannada Bible (KNCL) BSI 2016
ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.