2 Kings 10:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
Kannada BSI Bible 2016
ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೇಹುವಿಗೆ - ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದಿ; ಆದದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೇಹುವಿಗೆ, “ನೀನು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಗೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಹೃದಯದಲ್ಲಿದ್ದ ಎಲ್ಲದರ ಪ್ರಕಾರ ಮಾಡಿದ್ದರಿಂದ, ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದರು.