2 Kings 10:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಹು ಸತ್ತುಹೋದನು. ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೇಹುವಿನ ನಂತರ ಅವನ ಮಗನಾದ ಯೇಹೋವಾಹಾಜನು ಇಸ್ರೇಲಿನ ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
Kannada BSI Bible 2016
ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು. ಯೇಹುವು ಸಮಾರ್ಯಪಟ್ಟಣದಲ್ಲಿದ್ದುಕೊಂಡು ಇಸ್ರಾಯೇಲ್ಯರನ್ನು ಆಳಿದ್ದು ಇಪ್ಪತ್ತೆಂಟು ವರುಷ.
Kannada Bible (KNCL) BSI 2016
ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹು ತನ್ನ ಪಿತೃಗಳ ಜೊತೆಯಲ್ಲಿ ವಿಶ್ರಾಂತಿ ಹೊಂದಿದ್ದರಿಂದ ಅವನನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೆಹೋವಾಹಾಜನು ಅವನಿಗೆ ಬದಲಾಗಿ ಅರಸನಾದನು.