2 Kings 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಇಜ್ರೇಲಿನ ಅಧಿಕಾರಿಗಳು ಮತ್ತು ನಾಯಕರು ಬಹಳ ಭಯಗೊಂಡಿದ್ದರು. ಅವರು, “ಇಬ್ಬರು ರಾಜರು (ಯೋರಾವ್ ಮತ್ತು ಅಹಜ್ಯ) ಯೇಹುವನ್ನು ತಡೆಯಲಾಗಲಿಲ್ಲ. ನಾವು ಅವನನ್ನು ತಡೆಯಲಾಗುವುದಿಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.
Kannada BSI Bible 2016
ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬಹಳವಾಗಿ ಭಯಪಟ್ಟು - ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದುಕೊಂಡರು.
Kannada Bible (KNCL) BSI 2016
ಅವರು ಬಹಳವಾಗಿ ಭಯಪಟ್ಟರು. ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆಹೋದರು. ನಾವು ನಿಲ್ಲುವುದು ಹೇಗೆ?” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ತುಂಬಾ ಭಯಪಟ್ಟು, “ಇಬ್ಬರೂ ಅರಸರು ಅವನ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ನಾವು ನಿಲ್ಲುವುದು ಹೇಗೆ?” ಎಂದರು.