2 Kings 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
Kannada BSI Bible 2016
ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಧಾನ ಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.
Kannada Bible (KNCL) BSI 2016
ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.