2 Kings 11:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧಿಪತಿಗಳಿಗೆ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಯಾಜಕನು ಕೊಟ್ಟನು. ರಾಜನಾದ ದಾವೀದನು ಯೆಹೋವನ ಆಲಯದಲ್ಲಿ ಈ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಇಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
Kannada BSI Bible 2016
ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.
Kannada Bible (KNCL) BSI 2016
ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.