2 Kings 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ ‘ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
Kannada BSI Bible 2016
ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.
Kannada Bible (KNCL) BSI 2016
ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.