2 Kings 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
Kannada BSI Bible 2016
ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.
Kannada Bible (KNCL) BSI 2016
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.