2 Kings 11:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ ಹೊರಗೆ ಕರಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.