2 Kings 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.
Kannada BSI Bible 2016
ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿ ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳು ಮಾಡಿದರು.
Kannada Bible (KNCL) BSI 2016
ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.