2 Kings 11:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
Kannada BSI Bible 2016
ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟು ಶತಾಧಿಪತಿಗಳು, ಕಾರಿ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು, ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಕಾವಲುದಂಡಿನವರ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು. ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು;
Kannada Bible (KNCL) BSI 2016
ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.