2 Kings 11:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಷೆಬಳು ರಾಜನಾದ ಯೋರಾವುನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
Kannada BSI Bible 2016
ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.
Kannada Bible (KNCL) BSI 2016
ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.