2 Kings 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.
Kannada BSI Bible 2016
ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲಿ ಕತ್ತಿಯಿಂದ ಸಂಹರಿಸಿದರು.
Kannada Bible (KNCL) BSI 2016
ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.