2 Kings 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
Kannada BSI Bible 2016
ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು, ಇದೇ ನನ್ನ ಅಪ್ಪಣೆ ಎಂದು ಹೇಳಿದನು.
Kannada Bible (KNCL) BSI 2016
ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.