2 Kings 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.
Kannada BSI Bible 2016
ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವಾಷನು ಯೇಹುವಿನ ಆಳಿಕೆಯ ಏಳನೆಯ ವರುಷದಲ್ಲಿ ಅರಸನಾಗಿ ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
Kannada Bible (KNCL) BSI 2016
ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.