2 Kings 12:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada BSI Bible 2016
ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವಾಷನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಯೆಹೋವಾಷನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.