2 Kings 12:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
Kannada BSI Bible 2016
ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನಾದ ಯೆಹೋಯಾದಾವನು ಅವನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
Kannada Bible (KNCL) BSI 2016
ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.