2 Kings 12:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋದ್ವಾಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
Kannada BSI Bible 2016
ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೇರನ ಮಗನಾದ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗಟ್ಟದ ದಾರಿಯಲ್ಲಿರುವ ವಿುಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಕುಟುಂಬಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
Kannada Bible (KNCL) BSI 2016
ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.