2 Kings 13:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಷನು ಮಾಡಿದ ಮಹಾಕಾರ್ಯಗಳನ್ನು ಮತ್ತು ಯೆಹೂದದ ರಾಜನಾದ ಅಮಚ್ಯನ ವಿರುದ್ಧವಾಗಿ ಅವನು ಮಾಡಿದ ಯುದ್ಧಗಳನ್ನು, “ಇಸ್ರೇಲರ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada BSI Bible 2016
ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಉಳಿದ ಚರಿತ್ರೆಯೂ ಎಲ್ಲಾ ಶೂರ ಕೃತ್ಯಗಳೂ ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಇವನ ಉಳಿದ ಚರಿತ್ರೆ, ಶೂರಕೃತ್ಯಗಳ ಹಾಗು ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡೆಸಿದ ಯುದ್ಧದ ವಿವರವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.