2 Kings 13:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.
Kannada BSI Bible 2016
ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ ಎಂದನು. ಅವನು ತೆರೆದನು. ಅನಂತರ - ಬಾಣವನ್ನೆಸೆ ಎಂದು ಆಜ್ಞಾಪಿಸಿದನು. ಅವನು ಎಸೆಯಲು - ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ ಎಂದು ಹೇಳಿದನು.
Kannada Bible (KNCL) BSI 2016
“ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.