2 Kings 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಷನು, “ಬಾಣಗಳನ್ನು ತೆಗೆದುಕೊ” ಎಂದನು. ಯೋವಾಷನು ಬಾಣಗಳನ್ನು ತೆಗೆದುಕೊಂಡನು. ಆಗ ಎಲೀಷನು ಇಸ್ರೇಲಿನ ರಾಜನಿಗೆ, “ನೆಲದ ಮೇಲೆ ಹೊಡಿ” ಎಂದನು. ಯೋವಾಷನು ನೆಲವನ್ನು ಮೂರು ಸಲ ಹೊಡೆದನು. ನಂತರ ಅವನು ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ” ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, “ಇವುಗಳಿಂದ ನೆಲವನ್ನು ಹೊಡಿ” ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
Kannada BSI Bible 2016
ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಬಾಣಗಳನ್ನು ತೆಗೆದುಕೋ ಎಂದು ಆಜ್ಞಾಪಿಸಿದಾಗ ಅವನು ತೆಗೆದುಕೊಳ್ಳಲು - ಇವುಗಳಿಂದ ನೆಲವನ್ನು ಹೊಡಿ ಅಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.
Kannada Bible (KNCL) BSI 2016
ಇದಲ್ಲದೆ, ಎಲೀಷನು ಇಸ್ರಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದಾಗ ಅವನು ತೆಗೆದುಕೊಳ್ಳಲು, “ಇವುಗಳಿಂದ ನೆಲವನ್ನು ಸೀಳು,” ಎಂದನು. ಅವನು ಮೂರು ಸಾರಿ ಬಾಣಬಿಟ್ಟು ಸುಮ್ಮನೆ ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಬಾಣಗಳನ್ನು ತೆಗೆದುಕೋ,” ಎಂದನು. ಅರಸನು ತೆಗೆದುಕೊಂಡನು. ಎಲೀಷನು ಇಸ್ರಾಯೇಲಿನ ಅರಸನಿಗೆ, “ನೆಲದ ಮೇಲೆ ಹೊಡೆ,” ಎಂದನು. ಆಗ ಅವನು ಮೂರು ಸಾರಿ ಮಾತ್ರ ಹೊಡೆದು ನಿಂತನು.