2 Kings 13:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.
Kannada BSI Bible 2016
ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು.
Kannada Bible (KNCL) BSI 2016
ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು.