2 Kings 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada BSI Bible 2016
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada Bible (KNCL) BSI 2016
ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಕೈಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ, ಅವುಗಳನ್ನು ಹಿಂಬಾಲಿಸಿದನು.