2 Kings 13:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
Kannada BSI Bible 2016
ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವಾಹಾಜನ ಮಗನಾದ ಯೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರಿಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
Kannada Bible (KNCL) BSI 2016
ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.