2 Kings 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.
Kannada BSI Bible 2016
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಇವರ ಕೈಯಲ್ಲಿದ್ದರು.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.