2 Kings 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
Kannada BSI Bible 2016
ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್‌ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಇವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮುಂಚಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
Kannada Bible (KNCL) BSI 2016
ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.