2 Kings 13:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.
Kannada BSI Bible 2016
ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)
Kannada Bible (KNCL) BSI 2016
ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.