2 Kings 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
Kannada BSI Bible 2016
ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.
Kannada Bible (KNCL) BSI 2016
ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.