2 Kings 13:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷನು ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.
Kannada BSI Bible 2016
ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.
Kannada Bible (KNCL) BSI 2016
ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋವಾಷನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವಾಹಾಜನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೋವಾಷನು ಅವನಿಗೆ ಬದಲಾಗಿ ಅರಸನಾದನು.