2 Kings 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
Kannada BSI Bible 2016
ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
Kannada Bible (KNCL) BSI 2016
ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದುದರಿಂದ ಇಸ್ರಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಜುದೇಯ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಮಚ್ಯನು ಕೇಳದೆ ಹೋದನು. ಆದ್ದರಿಂದ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.