2 Kings 14:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
Kannada BSI Bible 2016
ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಷನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಯೋವಾಷನ ಉಳಿದ ಚರಿತ್ರೆ, ಅವನ ಶೂರಕೃತ್ಯಗಳ ಮತ್ತು ಜುದೇಯದ ರಾಜನಾದ ಅಮಚ್ಯನೊಡನೆ ನಡೆಸಿದ ಯುದ್ಧದ ವಿವರ, ಇವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷನು ಮಾಡಿದ ಇತರ ಕ್ರಿಯೆಗಳೂ, ಅವನ ಪರಾಕ್ರಮವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ್ದೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.