2 Kings 14:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.
Kannada BSI Bible 2016
ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ಯರ ರಾಜಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯಾರೊಬ್ಬಾಮನು ಅರಸನಾದನು.
Kannada Bible (KNCL) BSI 2016
ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ಸಮಾರಿಯದೊಳಗೆ ಇಸ್ರಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯಾರೊಬ್ಬಾಮನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸುಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಯಾರೊಬ್ಬಾಮನು ಅವನ ಬದಲಿಗೆ ಅರಸನಾದನು.