2 Kings 14:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.
Kannada BSI Bible 2016
ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.
Kannada Bible (KNCL) BSI 2016
ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.