2 Kings 14:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.
Kannada BSI Bible 2016
ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ
Kannada Bible (KNCL) BSI 2016
“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.