2 Kings 14:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
Kannada BSI Bible 2016
ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ.