2 Kings 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Kannada BSI Bible 2016
ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Kannada Bible (KNCL) BSI 2016
ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.