2 Kings 14:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada BSI Bible 2016
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada Bible (KNCL) BSI 2016
ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.