2 Kings 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.
Kannada BSI Bible 2016
ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು.
Kannada Bible (KNCL) BSI 2016
ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.