2 Kings 15:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆನಹೇಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮೆನಹೇಮನ ನಂತರ ಅವನ ಮಗನಾದ ಪೆಕಹ್ಯನು ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಇಸ್ರಾಯೇಲರ ಅರಸನಾದನು.
Kannada BSI Bible 2016
ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಅರಸನಾದನು.
Kannada Bible (KNCL) BSI 2016
ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಮಗ ಪೆಕಹ್ಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆನಹೇಮನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಪೆಕಹ್ಯನು ಅವನಿಗೆ ಬದಲಾಗಿ ಅರಸನಾದನು.