2 Kings 15:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಪೆಕಹ್ಯನು ಎರಡು ವರ್ಷ ಆಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.
Kannada BSI Bible 2016
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತನೆಯ ವರುಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.
Kannada Bible (KNCL) BSI 2016
ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆಂಟನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗ ಪೆಕಹ್ಯನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾಗಿ, ಎರಡು ವರ್ಷ ಆಳಿದನು.