2 Kings 15:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾವುನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
Kannada BSI Bible 2016
ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
Kannada Bible (KNCL) BSI 2016
ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.