2 Kings 15:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋತಾವುನು ರಾಜನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಯೋತಾವುನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಯೋತಾವುನ ತಾಯಿಯು ಚಾದೋಕನ ಮಗಳಾದ ಯೆರೂಷಾ ಎಂಬ ಹೆಸರಿನವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
Kannada BSI Bible 2016
ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
Kannada Bible (KNCL) BSI 2016
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.