2 Kings 15:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾವುನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
Kannada BSI Bible 2016
ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿದವನು ಇವನೇ.
Kannada Bible (KNCL) BSI 2016
ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.