2 Kings 15:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋತಾವುನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಯೋತಾವುನನ್ನು ಅವನ ಪೂರ್ವಿಕನಾದ ದಾವೀದನ ನಗರದಲ್ಲಿ ಸಮಾಧಿಮಾಡಿದರು. ಯೋತಾವುನ ನಂತರ ಅವನ ಮಗನಾದ ಅಹಾಜನು ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
Kannada BSI Bible 2016
ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.
Kannada Bible (KNCL) BSI 2016
ಯೋತಾಮನು ಸತ್ತು ಪಿತೃಗಳ ಬಳಿ ಸೇರಲು ಅವನ ಶವವನ್ನು ಅವನ ಪೂರ್ವಜನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಾಜನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.