2 Kings 15:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾವುನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
Kannada BSI Bible 2016
ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇವನನ್ನು ಕುಷ್ಠ ರೋಗದಿಂದ ಬಾಧಿಸಿದನು. ಆದದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು; ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.