2 Kings 15:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಜರ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ, ದಾವೀದ ನಗರದಲ್ಲಿ ಸಮಾಧಿಮಾಡಲಾಯಿತು. ಅಜರ್ಯನ ನಂತರ ಅವನ ಮಗನಾದ ಯೋತಾವುನು ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.
Kannada BSI Bible 2016
ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
Kannada Bible (KNCL) BSI 2016
ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಜರ್ಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.