2 Kings 16:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
Kannada BSI Bible 2016
ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.
Kannada Bible (KNCL) BSI 2016
ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನಾದ ಊರೀಯನು ಅದರ ಪ್ರಕಾರ ಒಂದು ಬಲಿಪೀಠವನ್ನು ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬರುವ ಮೊದಲೇ ಕಟ್ಟಿ ಮುಗಿಸಿದನು.