2 Kings 16:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
Kannada BSI Bible 2016
ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿವಿುಕಿಸಿದನು.
Kannada Bible (KNCL) BSI 2016
ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಿಪೀಠದ ಮೇಲೆ ದಹನಬಲಿಯನ್ನೂ ತನ್ನ ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು, ಪಾನಗಳನ್ನು ಹೊಯ್ದನು, ಸಮಾಧಾನದ ಬಲಿಗಳ ರಕ್ತವನ್ನು ಚಿಮುಕಿಸಿದನು.