2 Kings 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
Kannada BSI Bible 2016
ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ
Kannada Bible (KNCL) BSI 2016
ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.