2 Kings 16:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
Kannada BSI Bible 2016
ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಆಹಾಜನು ಅಶ್ಶೂರದ ಅರಸನ ನಿವಿುತ್ತವಾಗಿ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
Kannada Bible (KNCL) BSI 2016
ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.